Index   ವಚನ - 11    Search  
 
ಹರಹರಯೆಂದು ನೆನೆದಡೆ ಜನನ ಮರಣ ಹಿಂಗುವದೆ? ಹಾಂಗೆ ಲೋಕದ ಮಾತ ಕೇಳಲಾಗದು. ಅದು ಹೇಂಗೆಯೆಂದಡೆ: ಜ್ಯೋತಿಯ ನೆನೆದಡೆ ತಿಮಿರ ಹೋಹುದೇನಯ್ಯಾ? ಪಂಚಾಮೃತವ ನೆನೆದಡೆ ಹಸಿವು ತೃಷೆ ಅಡಗುವುದೇನಯ್ಯಾ? ಆಗಮಶಾಸ್ತ್ರವ ನೋಡಿದಡೆ, ಕಿವಿಗೊಟ್ಟು ಕೇಳಿ ಹಾಡಿ ಪಾಡಿದಡೆ, ಅಯ್ಯಾ ನಿಮ್ಮ ಕಂಡಂತಾಯಿತ್ತಯ್ಯಾ ಎಂದುದಾಗಿ, ಆದಡಾಗಲಿ ಕಂಡು ಆಡುವುದಲ್ಲದೆ, ಕಾಣದೆ ಆಡುವುದೆಲ್ಲ ಸಂತೆಯಾಗಿ ಹೋಯಿತ್ತಯ್ಯ ಕಾಣಾ, ಜಂಗಮಲಿಂಗಪ್ರಭುವೆ