Index   ವಚನ - 11    Search  
 
ಅರ್ಥವುಂಟೆಂದು ಅಹಂಕರಿಸಿ ಮಾಡುವನ ಭಕ್ತಿ ತೊತ್ತಿನ ಕೂಟ, ತೊರೆಯನ ಮೇಳದಂತೆ. ತನು-ಮನ-ಧನದಲ್ಲಿ ವಂಚನೆಯುಳ್ಳ ಪ್ರಪಂಚಿಯ ಮನೆಯ ಕೂಳು ಶುನಕನ ಬಾಯ ಎಲುವ ಪ್ರತಿಶುನಕ ತಿಂದಂತೆ ಕಾಣಾ! ರಾಮನಾಥ.