Index   ವಚನ - 29    Search  
 
ಉಂಕೆಯ ನಿಗುಚಿ ಸರಿಗೆಯ ಸಮಗೊಳಿಸಿ ಸಮಗಾಲನಿಕ್ಕಿ ಅಣಿಯೇಳ ಮುಟ್ಟದೆ ಹಿಡಿದ ಲಾಳಿಯ ಮುಳ್ಳು ಕಂಡಿಕೆಯ ನುಂಗಿತ್ತು. ಈ ಸೀರೆಯ ನೆಯ್ದವ ನಾನೊ ನೀನೋ? ರಾಮನಾಥ.