Index   ವಚನ - 37    Search  
 
ಎತ್ತಪ್ಪೆ ಶರಣಂಗೆ, ತೊತ್ತಪ್ಪೆ ಶರಣಂಗೆ ಭೃತ್ಯನಾಗಿ ಸದ್ಭಕ್ತರ ಮನೆಯ ಬಾಗಿಲು ಕಾಯ್ದಿಪ್ಪ ಸೊಣಗನಪ್ಪೆ. ಕರ್ತಾರ! ನಿನಗೆ ಕರವೆತ್ತಿ ಹೊಡವಡುವ ಭಕ್ತರ ಮನೆಯ ಹಿತ್ತಿಲ ಬೇಲಿಯಾಗಿಪ್ಪೆನಯ್ಯಾ, ರಾಮನಾಥ.