Index   ವಚನ - 41    Search  
 
ಎನ್ನೊಡಲಾದಡೆ ಎನ್ನಿಚ್ಛೆಯಲ್ಲಿರದೆ? ನಿನ್ನೊಡಲಾದಡೆ ನಿನ್ನಿಚ್ಛೆಯಲ್ಲಿರದೆ? ಅದು ಎನ್ನೊಡಲೂ ಅಲ್ಲ, ನಿನ್ನೊಡಲೂ ಅಲ್ಲ. ಅದು ನೀ ಮಾಡಿದ ಜಗದ ಬಿನ್ನಾಣದೊಡಲು ಕಾಣಾ! ರಾಮನಾಥ.