Index   ವಚನ - 79    Search  
 
ಗುರುಭಕ್ತನಾದಲ್ಲಿ ಘಟಧರ್ಮವಳಿದು ಲಿಂಗಭಕ್ತನಾದಲ್ಲಿ ಮನಸಂಚಲ ನಿಂದು ಜಂಗಮಭಕ್ತಿಯಲ್ಲಿ ಧನದಾಸೆಯಳಿದು ತ್ರಿವಿಧಾಂಗ ಸಲೆ ಸಂದು ತ್ರಿಕರಣ ಶುದ್ಧನಾಗಿದ್ದವಂಗೆ ಮರ್ತ್ಯ ಕೈಲಾಸವೆಂಬ ಕಾಳುಮಾತಿಲ್ಲ ಆತ ನಿಶ್ಚಿಂತ ನಿಜಮುಕ್ತನಯ್ಯಾ, ರಾಮನಾಥ.