Index   ವಚನ - 82    Search  
 
ಘಟವನೊಡೆದು ಬಯಲ ನೋಡಲದೇಕೆ? ಘಟದೊಳಗಿಪ್ಪುದೆ ಬಯಲೆಂದರಿದಡೆ ಸಾಲದೆ? ಪಟವ ಹರಿದು ತಂತುವ ನೋಡಲದೇಕೆ? ಆ ಪಟವೆ ತಂತುವೆಂದರಿದಡೆ ಸಾಲದೆ? ಕಟಕವ ಮುರಿದು ಕಾಂಚನವ ನೋಡಲದೇಕೆ? ಆ ಕಟಕವೆ ಕಾಂಚನವೆಂದರಿದಡೆ ಸಾಲದೆ? ತನ್ನನಳಿದು ಘನವ ನೋಡಲದೇಕೆ? ತಾನೆ ಘನವೆಂದರಿದಡೆ ಸಾಲದೆ? ಹೇಳಾ! ರಾಮನಾಥ.