Index   ವಚನ - 150    Search  
 
ಸಣ್ಣ ನನೆಯೊಳಗಣ ಪರಿಮಳವ ಹೊರಸೂಸಿ ಇದಿರಿಂಗೆ ಅರುಹಿಸಬಲ್ಲುದೆ ವಾಯು? ಕೊಡಗೂಸಿನೊಳಗಣ ಮೊಲೆ ಮುಡಿಯ ಹಡೆದ ತಾಯಿ-ತಂದೆಗಳೆಂದಡೆ ಕಾಣಿಸಿಕೊಡಬಲ್ಲರೆ ಕಾಬವರ ಕಣ್ಣಿಗೆ? ಪಕ್ವಕ್ಕಲ್ಲದೆ ಪರಿಣಾಮ ಕಾಣಿಸದು ಕಾಣಾ! ರಾಮನಾಥ.