Index   ವಚನ - 161    Search  
 
ಹಂದಿ ಶ್ರೀಗಂಧವ ಹೂಸಿದಡೇನು? ಗಂಧರಾಜನಾಗಬಲ್ಲುದೆ? ನವಿಲು ನಲಿಯಿತ್ತೆಂದಡೆ ಕಾಕೋಳಿ ಪುಚ್ಚವ ತರಕೊಂಡಂತೆ ಕರ್ಮಿಗಳ ಭಕ್ತಿ! ಹೊರವೇಷದ ವಿಭೂತಿ ರುದ್ರಾಕ್ಷಿಯ ಹೂಸಿದಡೇನು ತೆರನನರಿದು ಮರವೆಯ ಕಳದು ಮಾತಿನಂತೆ ನೀತಿಯುಳ್ಳಡೆ ಅವರ ಅಜಾತರೆಂಬೆ ಕಾಣಾ! ರಾಮನಾಥ.