Index   ವಚನ - 170    Search  
 
ಹೂವಿನೊಳಗಣ ಕಂಪ ಹೊರಸೂಸಿ ಸುಳಿವ ಅನಿಲನಂತೆ ಅಮೃತದೊಳಗಣ ರುಚಿಯ ನಾಲಿಗೆಯ ತುದಿಯಲ್ಲಿ ಅರಿವನ ಚೇತನದಂತೆ ನಿಲವಿಲ್ಲದ ರೂಪ ಕಳೆಯಲ್ಲಿ ವೇದಿಸುವವನ ಪರಿ! ರಾಮನಾಥ.