ಎನ್ನ ಪ್ರಾಣ ಮನ ಬುದ್ಧಿ ಚಿತ್ತಂಗಳು ನಿಮ್ಮ ತೊತ್ತಿರಯ್ಯಾ.
ಸತ್ವ ರಜ ತಮಂಗಳು ನಿಮ್ಮ ಭೃತ್ಯರಯ್ಯಾ.
ಅಂತಃಕರಣ ಚತುಷ್ಟಯಂಗಳು ನಿಮ್ಮ ಮಂತ್ರಿಗಳಯ್ಯಾ.
ಪಂಚೇಂದ್ರಿಯಂಗಳು ನಿಮ್ಮ ಪಡಿಹಾರರಯ್ಯಾ.
ಅರಿಷಡ್ವರ್ಗಂಗಳು ನಿಮ್ಮ ಲೆಂಕರಯ್ಯಾ.
ಸಪ್ತ ಧಾತುಗಳು ನಿಮ್ಮ ಬಾಣಸಿಗರಯ್ಯಾ.
ಅಷ್ಟಮದಂಗಳು ನಿಮ್ಮ ದಳವಾಯಿಗಳಯ್ಯಾ.
ನವರಸಂಗಳು ನಿಮ್ಮ ಭಂಡಾರಿಗಳಯ್ಯಾ.
ದಶವಾಯಗಳು ನಿಮ್ಮ ಛತ್ರ ಚಾಮರ ಸೀಗುರಿಗಳಯ್ಯಾ.
ಷೋಡಶಕಳೆಗಳು ನಿಮ್ಮ ರಾಣಿವಾಸವಯ್ಯಾ.
ಶಂಭು ಸೋಮನಾಥಲಿಂಗ,
ನಿಮಗೆನ್ನ ಕಾಯ ಮುಂತಾಗಿ ಬಾಹತ್ತರ ಡಿಂಗರಿಗರಯ್ಯಾ!