Index   ವಚನ - 4    Search  
 
ಅರ್ಚಿಸಿ ಪೂಜಿಸುವುದಕ್ಕೆ ಅಂಗವಾಗಿ, ಮನ ನೆನೆವುದಕ್ಕೆ ಘನತರವಾಗಿ, ಪೂಜಿಸುವುದಕ್ಕೆ ಪುಣ್ಯಮೂರ್ತಿಯಾಗಿ, ಭಾವ ನೆನೆವುದಕ್ಕೆ ಭವಗೇಡಿಯಾಗಿ, ಉಭಯದಂಗವ ತಾಳಿ ನಿಂದ ಕಾಲಾಂತಕ ಭೀಮೇಶ್ವರ ಲಿಂಗವು ತಾನೆ.