Index   ವಚನ - 10    Search  
 
ಅಹಂಕಾರವರತು ಗುರುವಾಗಿ, ಜಗವರತು ಲಿಂಗವಾಗಿ, ತ್ರಿವಿಧವರತು ಜಂಗಮವಾಗಿ, ಸಕಲೇಂದ್ರಿಯದ ಲಂಪಟವರತು ಭಕ್ತನಾಗಿ ಸಂಸಾರವೆಂಬ ಗಡಬಡೆಯಲ್ಲಿ ಸಿಲುಕದೆ, ಆವ ಸ್ಥಲದಲ್ಲಿ ನಿಂದು ನೋಡಿದಡೂ ಭಾವಶುದ್ಧವಾಗಿ ಗುರುವಿಂಗೆ ಗುರುವಾಗಿ, ಲಿಂಗಕ್ಕೆ ಲಿಂಗವಾಗಿ ಜಂಗಮಕ್ಕೆ ಜಂಗಮವಾಗಿ ಭಕ್ತರ ಯುಕ್ತಿಯ ಮಾರಿಕೊಂಡಿಪ್ಪ ಸದ್ಭಕ್ತ ಕಾಲಾಂತಕ ಭೀಮೇಶ್ವರಲಿಂಗವು ತಾನೆ.