Index   ವಚನ - 18    Search  
 
ಉಕ್ಕುದ ಕೊಂಬನ್ನಬರ ಭೃತ್ಯಾಚಾರ ಭಕ್ತಂಗೆ. ಉಕ್ಕುದನಿಕ್ಕಿದಲ್ಲಿ ಅವನ ಅರ್ಥಪ್ರಾಣ ಅಭಿಮಾನಕ್ಕೆ ತಪ್ಪುವನಾದಡೆ ಕರ್ತೃತ್ವ ಮೊದಲೆ ಕೆಟ್ಟಿತ್ತು, ಜಂಬುಕಫಲದ ನೇಮವ ಹಿಡಿದಂತಾಯಿತ್ತು, ಅದರಂಗವ ಕಂಡು ನಿಂದಿಸಿದ ಭಕ್ತಂಗೆ. ಬಾಗಿಲ ಪೂಜಿಸಿದ ಜಾರೆ ಲಕ್ಷಣದಂತಾಗಬೇಡ. ನೆರೆ ನೆಂಬು ಏನ ಹಿಡಿದಲ್ಲಿ, ಕಾಲಾಂತಕ ಭೀಮೇಶ್ವರಲಿಂಗವನರಿಯಬಲ್ಲಡೆ.