ವಚನ - 1000     
 
ಒಂದಡಕೆಯನಿಟ್ಟರೆ ಅಡ್ಡಗೋಡೆ ಬಸುರಾಯಿತ್ತು, ನಡುಮನೆಯೊಳಗಣ ಕಂಭ ಗಂಡು ಮಗನ ಹಡೆಯಿತ್ತು. ಹೊರಗೆ ಕಿಚ್ಚನಿಕ್ಕಿ ಒಳಗೆ ಅಗ್ನಿ ಪುಟವ ಹಾಕಿ, ಹಾದಿ ಹೋಗೋ ಅಣ್ಣ ನಮ್ಮ ಕರುವ ಕಾಣಲಿಲ್ಲವೆ? ನಿನ್ನೆ ಬಿತ್ತಿದ ಹೊಲದಾಗೆ ಮೊನ್ನೆ ಮೇಯ್ವುದ ಕಂಡೆ. ಕೊರಳ ಕೊಯ್ವುದ ಕಂಡೆ, ರಕ್ತವ ಕಾಣಲಿಲ್ಲ, ಸುಡುವುದ ಕಂಡೆ ಬೂದಿಯ ಕಾಣಲಿಲ್ಲ. ಇಷ್ಟ ಕಂಡು ಬೆರಗಾದ ನಮ್ಮ ಗುಹೇಶ್ವರಾ.