Index   ವಚನ - 119    Search  
 
ಅಂಥ ಬ್ರಹ್ಮಾಂಡವ ಹದಿನೆಂಟುಲಕ್ಷದ ಮೇಲೆ ಸಾವಿರದಿನ್ನೂರಾ ಎಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ನೈಮಿಷವೆಂಬ ಭುವನ. ಆ ಭುವನದೊಳು ಶಂಖುಕರ್ಣನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐನೂರೆಂಬತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಐನೂರೆಂಬತ್ತೈದುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.