Index   ವಚನ - 121    Search  
 
ಅಂಥ ಬ್ರಹ್ಮಾಂಡವ ಇಪ್ಪತ್ತುಲಕ್ಷದ ಮೇಲೆ ಸಾವಿರದ ನೂರಾತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಅಮರೇಶ್ವರವೆಂಬ ಭುವನ. ಆ ಭುವನದೊಳು ಅಮರನಾಯಕನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐನೂರತೊಂಬತ್ತೈದುಕೋಟಿ ಇಂದ್ರ-ಬ್ರಹ್ಮ-ನಾರಾಯಣರಿಹರು. ಐನೂರತೊಂಬತ್ತೈದುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.