Index   ವಚನ - 130    Search  
 
ಅಂಥ ಬ್ರಹ್ಮಾಂಡವ ಇಪ್ಪತ್ತೊಂಬತ್ತು ಲಕ್ಷದ ಮೇಲೆ ಸಾವಿರದಿನ್ನೂರ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಗಣವೆಂಬ ಭುವನ. ಆ ಭುವನದೊಳು ಗಣನಾಥನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರಾ ನಲವತ್ತು ಕೋಟಿ ದೇವರ್ಕಳು ಇಂದ್ರಚಂದ್ರಾದಿತ್ಯರು ವೇದಪುರಷರು ಮುನೀಂದ್ರರಿಹರು ನೋಡಾ. ಆರುನೂರಾ ನಲವತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.