Index   ವಚನ - 135    Search  
 
ಅಂಥ ಬ್ರಹ್ಮಾಂಡವ ಮೂವತ್ತುನಾಲ್ಕುಲಕ್ಷದ ಮೇಲೆ ಸಾವಿರದ ಮುನ್ನೂರಾ ಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ವಜ್ರವೆಂಬ ಭುವನ. ಆ ಭುವನದೊಳು ವಜ್ರಪಾದನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರರವತ್ತೈದುಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು. ಆರುನೂರರವತ್ತೈದುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.