Index   ವಚನ - 140    Search  
 
ಅಂಥ ಬ್ರಹ್ಮಾಂಡವ ಮೂವತ್ತೊಂಬತ್ತುಲಕ್ಷದ ಮೇಲೆ ಸಾವಿರದ ಮುನ್ನೂರಾ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಕ್ರತುಮರ್ದನವೆಂಬ ಭುವನ. ಆ ಭುವನದೊಳು ಅನಂತಲೋಚನನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರ ತೊಂಬತ್ತುಕೋಟಿ ಇಂದ್ರ-ಬ್ರಹ್ಮ-ನಾರಾಯಣ-ರುದ್ರರಿಹರು. ಆರುನೂರ ತೊಂಬತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.