Index   ವಚನ - 142    Search  
 
ಅಂಥ ಬ್ರಹ್ಮಾಂಡವ ನಾಲ್ವತ್ತೊಂದುಲಕ್ಷದ ಮೇಲೆ ಸಾವಿರದ ನಾನೂರೆಂಟು ಬ್ರಹ್ಮಾಂಡವನೊಳಕೊಂಡುದೊಂದು ವೃಷಧರವೆಂಬ ಭುವನ. ಆ ಭುವನದೊಳು ವಿಷಕಂಠನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರುಕೋಟಿ ನಾರಾಯಣ-ಬ್ರಹ್ಮ-ರುದ್ರರಿಹರು ನೋಡಾ. ಏಳುನೂರುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.