Index   ವಚನ - 187    Search  
 
ಅಂಥ ಬ್ರಹ್ಮಾಂಡವ ಎಂಬತ್ತಾರುಲಕ್ಷದ ಮೇಲೆ ಸಾವಿರದ ಎಂಟುನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದುಉಭಯನಖವೆಂಬ ಭುವನ. ಆ ಭುವನದೊಳು ಉಪಮಾತೀತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬಯಿನೂರಾ ಇಪ್ಪತ್ತೈದು ಕೋಟಿ ಬ್ರಹ್ಮ ನಾರಾಯಣ ರುದ್ರಾದಿಗಳಿಹರು ನೋಡಾ. ಒಂಬಯಿನೂರಾ ಇಪ್ಪತ್ತೈದು ಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ