Index   ವಚನ - 189    Search  
 
ಅಂಥ ಬ್ರಹ್ಮಾಂಡವ ಎಂಬತ್ತೆಂಟು ಲಕ್ಷದ ಮೇಲೆ ಸಾವಿರದ ಎಂಟುನೂರಾ ಎಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಹಂತವೆಂಬ ಭುವನ. ಆ ಭುವನದೊಳು ಭೂತನಾಥನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಮೂವತ್ತೈದು ಕೋಟಿ ರುದ್ರ ಬ್ರಹ್ಮ ನಾರಾಯಣರಿಹರು. ಒಂಬತ್ತುನೂರಾ ಮೂವತ್ತೈದು ಕೋಟಿ ಇಂದ್ರ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣ ಕೂಡಲಸಂಗಮದೇವಾ.