Index   ವಚನ - 191    Search  
 
ಅಂಥ ಬ್ರಹ್ಮಾಂಡವ ತೊಂಬತ್ತು ಲಕ್ಷದ ಮೇಲೆ ಸಾವಿರದ ಎಂಟುನೂರಾ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಧರ್ಮವೆಂಬ ಭುವನ. ಆ ಭುವನದೊಳು ಧರ್ಮಸ್ವರೂಪನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತು ನೂರಾ ನಾಲ್ವತ್ತೈದು ಕೋಟಿ ದೇವರ್ಕಳು ವೇದಪುರುಷರು ಇಂದ್ರಚಂದ್ರಾದಿತ್ಯರು ಇಹರು ನೋಡಾ. ಒಂಬತ್ತು ನೂರಾ ನಾಲ್ವತ್ತೈದು ಕೋಟಿ ರುದ್ರ ಬ್ರಹ್ಮ ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.