ವಚನ - 1009     
 
ಒಂದೆಂಬೆನೆ? ಎರಡಾಗಿದೆ; ಎರಡೆಂಬೆನೆ? ಒಂದಾಗಿದೆ. ಒಂದೆರಡೆಂಬ ಸಂದೇಹವಿದೇನೊ? ಆಗಲಲಿಲ್ಲದ ಕೂಟಕ್ಕೆ ಬಿಚ್ಚಿ ಬೇರಾಗದ ಉಪದೇಶ! ಗುರು ಶಿಷ್ಯರೆಂಬ ಭಾವಕ್ಕೆ ಭೇದವುಂಟೆ ಗುಹೇಶ್ವರಾ?