Index   ವಚನ - 227    Search  
 
ಆ ಅಖಂಡ ಮಹಾಮೂಲಸ್ವಾಮಿಯ ಸ್ಥಲದ ವಚನವೆಂತೆಂದೊಡೆ: ನಿರಂಜನಾತೀತಪ್ರಣವ, ಅವಾಚ್ಯಪ್ರಣವ, ಕಲಾಪ್ರಣವ, ಅನಾದಿಪ್ರಣವ, ಆದಿಪ್ರಣವ ಶಿವಪ್ರಣವ, ಶಕ್ತಿಪ್ರಣವ, ಶಿವಶಕ್ತಿರಹಿತವಾಗಿಹ ಮಹಾಪ್ರಣವ ಮೊದಲಾದ ಅನಂತಕೋಟಿ ಪ್ರಣವಂಗಳಿಲ್ಲದಂದು, ಚಿತ್ಪ್ರಕಾಶ ಚಿದಾಕಾಶ ಮಹದಾಕಾಶ ಮಹಾಕಾಶ ಶಿವಾಕಾಶ ಬಿಂದ್ವಾಕಾಶ ನಾದಾಕಾಶ ಕಲಾಕಾಶ ಪ್ರಣವಾಕಾಶ ಮೊದಲಾಗಿ ಅನಂತಕೋಟಿ ಮಹಾಪ್ರಣವಾಕಾಶ, ಅತಿಪ್ರಣವಾಕಾಶ ಅತಿಮಹಾತೀತಪ್ರಣವಾಕಾಶಗಳಿಲ್ಲದಂದು, ಆದಿ ಅನಾದಿ ಸಂಗತ ಅನಂತ ಅರ್ಭಕ ತಮಂಧ ತಾರಜ ತಂಡಜ ಭಿನ್ನಜ ಭಿನ್ನಾಯುಕ್ತ ಅವ್ಯಕ್ತ ಅಮದಾಯುಕ್ತ ಮಣಿರಣ ಮಾನ್ಯರಣ ವಿಶ್ವಾರಣ ವಿಶ್ವಾವಸು ಅಲಂಕೃತ ಕೃತಯುಗ ತ್ರೇತಾಯುಗ ದ್ವಾಪರಯುಗ ಕಲಿಯುಗಂಗಳೆಂಬ ಇಪ್ಪತ್ತೊಂದು ಯುಗ ಮೊದಲಾಗಿ ಅನಂತಕೋಟಿ ಯುಗಂಗಳು ಅತಿಮಹಾಯುಗಂಗಳು, ಅತಿಮಹಾತೀತಮಹಾಯುಗಂಗಳಿಲ್ಲದಂದು, ಆದಿಮೂಲ ಅನಾದಿಮೂಲಂಗಳಿಗತ್ತತ್ತವಾದ ಮಹಾಮೂಲಸ್ವಾಮಿಯ ಮೀರಿದ ಅತಿಮಹಾಮೂಲಸ್ವಾಮಿಗತ್ತತ್ತವಾಗಿಹ ಅಖಂಡ ಮಹಾಮೂಲಸ್ವಾಮಿಯು ಇದ್ದನಯ್ಯ ಇಲ್ಲದಂತೆ ನಮ್ಮ ಅಪ್ರಮಾಣ ಕೂಡಲಸಂಗಮದೇವಾ.