ವಚನ - 1017     
 
ಒಡಲೊಳಗಿದ್ದು ಒಡಲಿಂಗಾಧಾರವಾಗಿ ಒಡಲ ಸೋಂಕದೆ, ಒಡಲ ಬೆಳಗುವ ಪರಿಯ ನೋಡಾ! ಬೆಳಗಿಂಗೆ ಬೆಳಗಾಗಿ ಬೆಳಗುವ ಪರಿಯ ನೋಡಾ! ಪರಮಚೈತನ್ಯ ನಿರಾಳ ಗುಹೇಶ್ವರಲಿಂಗವ ನೋಡಾ.