ವಚನ - 1018     
 
ಒಳಗ ತೊಳೆದು ಜಲವ ತುಂಬಲರಿಯದ ಅರೆಮರುಳನೇನಾದ ಹೇಳಿರೆ? ಜಲದ ಸಂಗವ ತೊರೆಯಲರಿಯದೆ ಜಲವ ಬಯಸುವನೆಂತಿರ್ದ ಹೇಳಿರೆ? ನೆಲನ ಶೋಧಿಸಿ ನೆಲೆಯನರಿಯದೆ, ಕೆರೆಯ ಕಟ್ಟಿಸುವ ಒಡ್ಡ ರಾಮನ ಇರವೆಂತು ಹೇಳಿರೆ? ನಮ್ಮ ಗುಹೇಶ್ವರನ ನಿಲವನರಿಯದ ಮರುಳ ಸಿದ್ಧರಾಮನೆಂತಿರ್ದಹ ಹೇಳಿರೆ?