Index   ವಚನ - 297    Search  
 
ಸ್ವಾಧಿಷ್ಠಾನಚಕ್ರದ ಷಡುದಳಪದ್ಮವ ಪೊಕ್ಕು ಸಾಧಿಸಿ, ಅಲ್ಲಿಹ ಮಂತ್ರ-ಪದ-ವರ್ಣ-ಭುವನ-ತತ್ವ-ಕಲೆಗಳಂ ಕಂಡು, ಅಲ್ಲಿ ಪಚ್ಚೆಯವರ್ಣವಾಗಿಹ ಜ್ಯೋತಿರ್ಮಯಲಿಂಗಮಂ ಬೆರಸಿ ಮನ ಪವನ ಬಿಂದುವಂ ಏಕೀಕರಿಸಿ ನಾಭಿಚಕ್ರಕ್ಕೆ ನೆಗೆದನು ನೋಡಾ ಅಪ್ರಮಾಣಕೂಡಲಸಂಗಮದೇವಾ.