Index   ವಚನ - 333    Search  
 
ಇನ್ನು ವಿಭೂತಿ ಭಸಿತ ಭಸ್ಮಕ್ಷಾರ ರಕ್ಷೆ ಎಂಬ ಪಂಚ ವಿಭೂತಿ ಉತ್ಪತ್ಯವೆಂತೆಂದಡೆ: ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನವೆಂಬ ಪಂಚಮುಖದಲ್ಲಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಉತ್ಪತ್ಯವಾಯಿತ್ತು. ಆ ಪೃಥ್ವಿಯಪ್ಪುತೇಜವಾಯುವಾಕಾಶದಿಂದಲ್ಲಿ ನಿವೃತ್ತಿ ಪ್ರತಿಷ್ಠೆ ವಿದ್ಯಾ ಶಾಂತಿ ಶಾಂತ್ಯಾತೀತಯೆಂಬ ಪಂಚಕಲೆಗಳುತ್ಪತ್ಯವಾಯಿತ್ತು. ಆ ಪಂಚಕಲೆಗಳಿಂದ ನಂದೆ ಭದ್ರೆ ಸುರಭಿ ಸುಶೀಲೆ ಸುಮನೆಯೆಂಬ ಪಂಚಗೋವುಗಳುತ್ಪತ್ಯವಾಯಿತ್ತು. ಆ ಪಂಚಗೋವುಗಳ ಗೋಮಯದಲ್ಲಿ ವಿಭೂತಿ ಭಸಿತ ಭಸ್ಮಕ್ಷಾರ ರಕ್ಷೆಯೆಂಬ ಪಂಚವಿಭೂತಿ ಉತ್ಪತ್ಯವಾಯಿತ್ತು. ಇದಕ್ಕೆ ಜಾಬಾಲೋಪನಿಷತ್: ಸದ್ಯೋಜಾತಾತ್ ಪೃಥಿವೀ ತಸ್ಯಾ ನಿವೃತ್ತಿಃ ತಸ್ಯಾಃ ಕಪಿಲವರ್ಣಾ ನಂದಾ ತಸ್ಯಾಃ ಗೋಮಯೇನ ವಿಭೂತಿರ್ಜಾತಾ || ವಾಮದೇವಾದುದಕಂ ತಸ್ಮಾತ್ ಪ್ರತಿಷ್ಠಾ ತಸ್ಯಾಃ ಕೃಷ್ಣವರ್ಣಾ ಭದ್ರಾ ತಸ್ಯಾಃ ಗೋಮಯೇನ ಭಸಿತಂ ಜಾತಂ || ಅಘೋರಾದ್ವಹ್ನಿಃ ತಸ್ಮಾತ್ ವಿದ್ಯಾ ತಸ್ಯಾಃ ರಕ್ತವರ್ಣಾ ಸುರಭೀ ತಸ್ಯಾಃ ಗೋಮಯೇನ ಭಸ್ಮ ಜಾತಂ || ತತ್ಪುರುಷಾತ್ ವಾಯುಃ ತಸ್ಮಾತ್ ಶಾಂತಿಃ ತಸ್ಯಾಃ ಶ್ವೇತವರ್ಣಾ ಸುಶೀಲಾ ತಸ್ಯಾಃ ಗೋಮಯೇನ ಕ್ಷಾರಂ ಜಾತಂ || ಈಶಾನಾದಾಕಾಶಃ ತಸ್ಮಾತ್ ಶಾಂತ್ಯತೀತಾ ತಸ್ಯಾಃ ಚಿತ್ರವರ್ಣಾ ಸುಮನಾಃ ತಸ್ಯಾಃ ಗೋಮಯೇನ ರಕ್ಷಾ ಜಾತಾ ||'' ``ಐಶ್ವರ್ಯಕಾರಣಾತ್ ಭೂತಿಃ, ಭಾಸನಾತ್ ಭಸಿತಂ, ಸರ್ವಾಘಭಕ್ಷಣಾತ್ ಭಸ್ಮಂ, ಅಪದಾಂ ಕ್ಷರಣಾತ್ ಕ್ಷಾರಂ, ಭೂತಪ್ರೇತಪಿಶಾಚಬ್ರಹ್ಮರಾಕ್ಷಸಾಪಸ್ಮಾರ ಭವಭೀತಿಭ್ಯೋsಭಿರಕ್ಷಣಾತ್ ರಕ್ಷೇತಿ ||'' ಇಂತೆಂದುದು ಶ್ರುತಿ. ಇದಕ್ಕೆ ಕ್ರಿಯಾಸಾರೇ: ವಿಭೂತಿರ್ಭಸಿತಂ ಭಸ್ಮ ಕ್ಷಾರಂ ರಕ್ಷೇತಿ ಭಸ್ಮನಃ | ಭವಂತಿ ಪಂಚ ನಾಮಾನಿ ಹೇತು ರಕ್ಷಣಾದ್ರಕ್ಷೇತಿ ||'' ಇಂತೆಂದುದು ಶ್ರುತಿ. ಪಂಚಭಿಃಬೃಷಂ ಐಶ್ವರ್ಯಕಾರಣಾದ್ಭೂತಿ, ಭಸ್ಮ ಸರ್ವಾಘಭಕ್ಷಣಾತ್, ಭಾಸನಾತ್ ಭಸಿತಂ, ತತ್ವಾ ಕ್ಷರಣಾತ್‍ಕ್ಷಾರಮಾಪದಂ, ಭೂತಪ್ರೇತಪಿಶಾಚೇಭ್ಯೋ ಸ್ವರ್ಗಹೇತುಭ್ಯೋಭಿರಕ್ಷಣಾತ್ ರಕ್ಷಾ ಸ್ಯಾತ್ ಕ್ರೂರಸರ್ಪೇಭ್ಯೋ ವ್ಯಾಘ್ರಾದಿಭ್ಯಶ್ಚ ಸರ್ವದಾ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.