ವಚನ - 1024     
 
ಓದಿ ಓದಿ ವೇದ ವಾದಕ್ಕಿಕ್ಕಿತ್ತು. ಕೇಳೀ ಕೇಳಿ ಶಾಸ್ತ್ರ ಸಂದೇಹಕ್ಕಿಕ್ಕಿತ್ತು. ಅರಿದೆ ಅರಿದೆನೆಂದು ಆಗಮ ಅಗಲಕ್ಕೆ ಹರಿಯಿತ್ತು. ನೀನೆತ್ತ ನಾನೆತ್ತಲೆಂದು, ಬೊಮ್ಮ ಬಕ್ಕಟ ಬಯಲು ಗುಹೇಶ್ವರಾ