Index   ವಚನ - 1025    Search  
 
ಓಹೋ ನಮಃ ಶಿವಾಯ, ಮಹದಾಕಾಶದ ಮರೆಯಲ್ಲಿರ್ದ ಶಾಂತ್ಯರ್ಕನ ನಿಲವೊ! ದಶಮರುತನ ಹೊಯಿಲಿಲ್ಲದೆ, ತಾನೆ ಲಿಂಗದ ಜ್ಞಾನಜ್ಯೋತಿಯ ನಿಲವೊ! ತನ್ನಿಂದ ತಾನಾಗಿ ಮುಕ್ತಿಯೆ ಕರಿಗೊಂಡ ಮುಕ್ತಿಯ ಮುತ್ತಿನ ಧವಳಕಾಂತಿಯ ನಿಲವೊ! ರುದ್ರಾಕ್ಷಿಯ ಹಂಗು ಬೇಡವೆಂದು ಹೊದ್ದ ಚರ್ಮದ ಹೊದಿಕೆಯಂ ತೆಗೆದ ಗಿಟಿ ಗಿಟಿ ಜಂತ್ರದ ನಿಲವೊ! ಅಲ್ಲ, ತನ್ನ ನಿಲವನರಿಯದೆ ವಾದಿಸುತ್ತಿರಲು, ಉರಿಲಿಂಗೋದ್ಭವವಾದ ಉರಿಲಿಂಗದ ನಿಲವೋ! ಆವ ನಿಲವೆಂದರಿಯಬಾರದು! ಗುಹೇಶ್ವರನ ಕಂಗಳಿಗೆ ಒಂದಾಶ್ಚರ್ಯ ತೋರಿತ್ತು ಕಾಣಾ ಸಂಗನಬಸವಣ್ಣಾ!