Index   ವಚನ - 365    Search  
 
ಇನ್ನು ಷಟ್ಸ್ಥಲದ ಭೇದವೆಂತೆಂದಡೆ: ಸದಾಚಾರದಲ್ಲಿ ನಡಹ, ಶಿವನಲ್ಲಿ ಭಕ್ತಿಯಾಗಿಹ, ಲಿಂಗಜಂಗಮ ಒಂದೆಯೆಂಬ ಬುದ್ಧಿಯಾಗಿಹ, ಲಾಂಛನಧಾರಿಗಳ ಕಂಡಡೆ ಒಂದಿಸುವುದೀಗ ಭಕ್ತಸ್ಥಲ ನೋಡಾ. ಇದಕ್ಕೆ ಈಶ್ವರೋsವಾಚ: ಸದಾಚಾರಂ ಶಿವೇ ಭಕ್ತಿಃ ಲಿಂಗಜಂಗಮೇ ರತಿಃ | ಲಾಂಛನಂ ಚ ಶರಣ್ಯಂ ಚ ಭಕ್ತಿಸ್ಥಲಸುಬುದ್ಧಿಮಾನ್ || '' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.