Index   ವಚನ - 370    Search  
 
ಕ್ಷುತ್ಪಿಪಾಸೆ ಶೋಕ ಮೋಹ ಜನನ ಮರಣ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳಂ ಬಿಟ್ಟು ಅಷ್ಟವಿಧಾರ್ಚನೆ, ಷೋಡಶೋಪಚಾರವಿಲ್ಲದಿರುವ ಕ್ಷೀರದೊಳಗಣ ಘೃತದಂತೆ, ತಿಲದೊಳಗಣ ತೈಲದಂತೆ, ಪುಷ್ಪದೊಳಗಣ ಪರಿಮಳದಂತೆ, ಉಪ್ಪು ಉದಕವ ಕೂಡಿದಂತೆ, ವಾರಿಕಲ್ಲು ವಾರಿಯ ಕೂಡಿದಂತೆ, ಕರ್ಪುರವು ಜ್ಯೋತಿಯ ಕೂಡಿದಂತೆ, ಮನ ಲಿಂಗದಲ್ಲಿ ಲೀಯವಾಗಿಹುದೀಗ ಐಕ್ಯಸ್ಥಲ ನೋಡಾ, ಇದಕ್ಕೆಈಶ್ವರೋsವಾಚ: ಷಡೂರ್ಮಯಶ್ಚ ಷಡ್ವರ್ಗೋ ನಾಸ್ತಿ ಅಷ್ಟವಿಧಾರ್ಚನಂ | ನಿರ್ಭಾವಂ ಶಿವಲಿಂಗೈಕ್ಯಂ ಶಿಖಿಕರ್ಪೂರಯೋಗವತ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.