Index   ವಚನ - 1030    Search  
 
ಕಂಡುದೆಲ್ಲ ಪಾವನ, ಕೇಳಿತ್ತೆಲ್ಲ ಪರಮಬೋಧೆ, ಮುಟ್ಟಿತ್ತೆಲ್ಲ ಪರುಷದ ಸೋಂಕು, ಒಡನೆ ನುಡಿದವರೆಲ್ಲ ಸದ್ಯೋನ್ಮುಕ್ತರು. ಸುಳಿದ ಸುಳುಹೆಲ್ಲ ಜಗತ್ಪಾವನ, ಮೆಟ್ಟಿದ ಧರೆಯೆಲ್ಲ ಅವಿಮುಕ್ತಕ್ಷೇತ್ರ, ಸೋಂಕಿದ ಜಲವೆಲ್ಲ ಪುಣ್ಯತೀರ್ಥಂಗಳು. ಶರಣೆಂದು ಭಕ್ತಿಯ ಮಾಡಿದವರೆಲ್ಲರು ಸಾಯುಜ್ಯರು. ಗುಹೇಶ್ವರಾ ನಿಮ್ಮ ಸುಳುಹಿನ ಸೊಗಸನುಪಮಿಸಬಾರದು.