ವಚನ - 1039     
 
ಕಣ್ಣ ಮುಂದಿರ್ದವನ ಕಾಣದೆ ಹೋದೆನು. ನೋಡೂದ ನೋಡಲರಿಯದೆ ಕೆಟ್ಟಿತ್ತು ಲೋಕವೆಲ್ಲಾ. ನೋಡೂದ ನೋಡಬಲ್ಲಡೆ ಕೂಡಲಿಲ್ಲ ಅಗಲಲಿಲ್ಲ. ನೋಡದ ಕೂಡದ ಅಗಲದ ಸುಖವನು ಗುಹೇಶ್ವರಾ ನಿಮ್ಮ ಶರಣ ಬಲ್ಲನು.