Index   ವಚನ - 512    Search  
 
ಇನ್ನೊಂದು ಪ್ರಕಾರದ ಷಡ್ಲಿಂಗನ್ಯಾಸಸ್ಥಲವೆಂತೆಂದಡೆ: ಪೃಥ್ವಿಯೇ ಅಂಗವಾದ ಭಕ್ತನ ಸುಚಿತ್ತಹಸ್ತದಲ್ಲಿ ಆಚಾರಲಿಂಗ ನ್ಯಾಸವಾಗಿಹುದು. ಅಪ್ಪುವೆ ಅಂಗವಾದ ಮಹೇಶ್ವರನ ಸುಬುದ್ಧಿಹಸ್ತದಲ್ಲಿ ಗುರುಲಿಂಗ ನ್ಯಾಸವಾಗಿಹುದು. ಅನಲಾಂಗವಾದ ಪ್ರಸಾದಿಯ ನಿರಹಂಕಾರಹಸ್ತದಲ್ಲಿ ಶಿವಲಿಂಗ ನ್ಯಾಸವಾಗಿಹುದು. ವಾಯುವೇ ಅಂಗವಾದ ಪ್ರಾಣಲಿಂಗಿಯ ಸುಮನವೆಂಬ ಹಸ್ತದಲ್ಲಿ ಚರಲಿಂಗ ನ್ಯಾಸವಾಗಿಹುದು. ವ್ಯೋಮಾಂಗವಾದ ಶರಣನ ಸುಜ್ಞಾನಹಸ್ತದಲ್ಲಿ ಪ್ರಸಾದಲಿಂಗ ನ್ಯಾಸವಾಗಿಹುದು. ಆತ್ಮಾಂಗವಾದ ಐಕ್ಯನ ಭಾವಹಸ್ತದಲ್ಲಿ ಮಹಾಲಿಂಗ ನ್ಯಾಸವಾಗಿಹುದು ನೋಡಾ. ಇದಕ್ಕೆ ಈಶ್ವರೋsವಾಚ: ಆಚಾರಂ ಚಿತ್ತಹಸ್ತಂ ಚ ಬುದ್ಧಿಹಸ್ತೇ ಗುರುಸ್ತಥಾ | ಶಿವಲಿಂಗಂ ಚ ಅಹಂಕಾರೇ ಚರಲಿಂಗ ಮನೇ ತಥಾ || ಪ್ರಸಾದಂ ಜ್ಞಾನಹಸ್ತೇ ಚ ಭಾವಹಸ್ತೇ ಮಹಸ್ತಥಾ | ಇತಿ ಲಿಂಗಸ್ಥಲಂ ಜ್ಞಾತುಂ ದುರ್ಲಭಂ ಚ ವರಾನನೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.