Index   ವಚನ - 528    Search  
 
ಆತ್ಮನೆ ಅಂಗವಾದ ಐಕ್ಯ ಭಾವವೆಂಬ ಹಸ್ತದಲ್ಲಿ ಮಹಾಲಿಂಗಕ್ಕೆ ಮನವೆಂಬ ಮುಖದಲ್ಲಿ ಪರಿಣಾಮ ಸಮರ್ಪಣವ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ. ಇದಕ್ಕೆ ಈಶ್ವರೋsವಾಚ: ಆತ್ಮಾಂಗೋ ಭಾವಹಸ್ತೇನ ಐಕ್ಯಶ್ಚಾಪಿ ಮಹಾತ್ಮನೇ | ಹೃನ್ಮುಖೀ ಅರ್ಪಿತಂಚೈವ ಪದಾರ್ಥಂ ತೃಪ್ತಿಭೋಕ್ತವಾನ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.