Index   ವಚನ - 576    Search  
 
ಅನಾದಿ ಸದಾಶಿವತತ್ವ, ಅನಾದಿ ಈಶ್ವರತತ್ವ, ಅನಾದಿ ಮಹೇಶ್ವರತತ್ವವೆಂಬ, ಅನಾದಿ ತ್ರಿತತ್ವಂಗಳು ತಾನಲ್ಲ. ಆದಿ ಸದಾಶಿವತತ್ವ, ಆದಿ ಈಶ್ವರತತ್ವ, ಆದಿ ಮಹೇಶ್ವರತತ್ವವೆಂಬ ಆದಿ ತ್ರಿತತ್ವಂಗಳು ತಾನಲ್ಲ. ಶಂಕರ ಶಶಿಧರ ಗಂಗಾಧರ ಗೌರೀಶ ಕಳಕಂಠ ರುದ್ರ, ಕಪಾಲಮಾಲಾಧರ ರುದ್ರ,ಕಾಲಾಗ್ನಿರುದ್ರ, ಏಕಪಾದರುದ್ರ, ಮಹಾಕಾಲರುದ್ರ, ಮಹಾನಟನಾಪಾದರುದ್ರ, ಊರ್ಧ್ವಪಾದರುದ್ರ, ಬ್ರಹ್ಮಕಪಾಲ ವಿಷ್ಣುಕಂಕಾಳವ ಪಿಡಿದಾಡುವ ಪ್ರಳಯಕಾಲರುದ್ರರು, ತ್ರಿಶೂಲ ಖಟ್ವಾಂಗಧರರು ವೃಷಭವಾಹನರು ಪಂಚಮುಖರುದ್ರರು, ಶೂನ್ಯಕಾಯನೆಂಬ ಮಹಾರುದ್ರ, ಅನೇಕಮುಖ ಒಂದುಮುಖವಾಗಿ ವಿಶ್ವರೂಪರುದ್ರ, ವಿಶ್ವಾಧಿಕಮಹಾರುದ್ರ, ಅಂಬಿಕಾಪತಿ ಉಮಾಪತಿ ಪಶುಪತಿ ಮೊದಲಾದ ಗಣಾಧೀಶ್ವರರೆಂಬ ಮಹಾಗಣಂಗಳು ತಾನಲ್ಲ. ಸಹಸ್ರಶಿರ ಸಹಸ್ರಾಕ್ಷ ಸಹಸ್ರಬಾಹು ಸಹಸ್ರಪಾದವನುಳ್ಳ ವಿರಾಟ್ಪುರುಷನು ತಾನಲ್ಲ. ವಿಶ್ವತೋಮುಖ ವಿಶ್ವತೋಚಕ್ಷು ತಾನಲ್ಲ. ವಿಶ್ವತೋಪಾದವನುಳ್ಳ ಮಹಾಪುರುಷ ತಾನಲ್ಲ. ಪತಿ-ಪಶು-ಪಾಶಂಗಳೆಂಬ ಸಿದ್ಧಾಂತಜ್ಞಾನತ್ರಯಂಗಳು ತಾನಲ್ಲ. ತ್ವಂ ಪದ ತತ್ಪದ ಅಸಿಪದವೆಂಬ ವೇದಾಂತಪದತ್ರಯ ಪದಾರ್ಥಂಗಳು ತಾನಲ್ಲ. ಜೀವಹಂಸ ಪರಮಹಂಸ ಪರಾಪರಹಂಸನೆಂಬ ಹಂಸತ್ರಯಂಗಳು ತಾನಲ್ಲ. ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವರೆಂಬ ಪಂಚಮೂರ್ತಿಗಳು ತಾನಲ್ಲ. ಆ ಸದಾಶಿವತತ್ವದಲ್ಲುತ್ಪತ್ಯವಾದ ಪೃಥ್ವಿ ಅಪ್ಪು ತೇಜ ವಾಯು ಆಕಾಶ ಚಂದ್ರ ಸೂರ್ಯಾತ್ಮರೆಂಬ ಅಷ್ಟತನುಮೂರ್ತಿಗಳು ತಾನಲ್ಲ. ಅಸ್ಥಿ ಮಾಂಸ ಚರ್ಮ ನರ ರೋಮ -ಈ ಐದು ಪೃಥ್ವಿಯಿಂದಾದವು. ಪಿತ್ಥ ಶ್ಲೇಷ್ಮ ರಕ್ತ ಶುಕ್ಲ ಮೂತ್ರ -ಈ ಐದು ಅಪ್ಪುವಿನಿಂದಾದವು. ಕ್ಷುದೆ ತೃಷೆ ನಿದ್ರೆ ಆಲಸ್ಯ ಸಂಗ -ಈ ಐದು ಅಗ್ನಿಯಿಂದಾದವು. ಪರಿವ ಪಾರುವ ಸುಳಿವ ಕೂಡುವ ಅಗಲುವ -ಈ ಐದು ವಾಯುವಿನಿಂದಾದವು. ವಿರೋಧಿಸುವ ಅಂಜಿಸುವ ನಾಚುವ ಮೋಹಿಸುವ ಅಹುದಾಗದೆನುವ -ಈ ಐದು ಆಕಾಶದಿಂದಾದವು. ಇಂತೀ ಪಂಚಭೌತಿಕದ ಪಂಚವಿಂಶತಿ ಗುಣಂಗಳಿಂದಾದ ದೇಹವು ತಾನಲ್ಲ. ಶ್ರೋತ್ರ ತ್ವಕ್ಕು ನೇತ್ರ ಜಿಹ್ವೆ ಘ್ರಾಣವೆಂಬ ಜ್ಞಾನೇಂದ್ರಿಯಂಗಳು ತಾನಲ್ಲ. ವಾಕು ಪಾದ ಪಾಣಿ ಪಾಯು ಗುಹ್ಯವೆಂಬ ಕರ್ಮೇಂದ್ರಿಯಂಗಳು ತಾನಲ್ಲ. ಶಬ್ದ ಸ್ಪರ್ಶ ರೂಪ ರಸ ಗಂಧಂಗಳೆಂಬ ಪಂಚವಿಷಯಂಗಳು ತಾನಲ್ಲ, ವಚನ ಗಮನ ದಾನ ವಿಸರ್ಗ ಆನಂದವೆಂಬ ಕರ್ಮೇಂದ್ರಿಯಂಗಳ ತನ್ಮಾತ್ರೆಗಳು ತಾನಲ್ಲ, ಇಡೆ ಪಿಂಗಳೆ ಸುಷುಮ್ನಾ ಗಾಂಧಾರೀ ಹಸ್ತಿಜಿಹ್ವಾ ಪೂಷೆ ಪಯಸ್ವಿನೀ ಅಲಂಬು ಲಕುಹ ಶಂಕಿನೀ- ಎಂಬ ದಶನಾಡಿಗಳು ತಾನಲ್ಲ. ಪ್ರಾಣ ಅಪಾನ ವ್ಯಾನ ಉದಾನ ಸಮಾನ ನಾಗ ಕೂರ್ಮ ಕ್ರಕರ ದೇವದತ್ತ ಧನಂಜಯವೆಂಬ ದಶವಾಯುಗಳು ತಾನಲ್ಲ. ಸ್ಥೂಲತನು, ಸೂಕ್ಷ್ಮತನು, ಕಾರಣತನು, ನಿರ್ಮಲತನು, ಆನಂದತನು, ಚಿನ್ಮಯತನು, ಚಿದ್ರೂಪತನು, ಶುದ್ಧತನುವೆಂಬ ಅಷ್ಟತನುಗಳು ತಾನಲ್ಲ. ಜೀವಾತ್ಮ ಅಂತರಾತ್ಮ ಪರಮಾತ್ಮ ನಿರ್ಮಲಾತ್ಮ ಶುದ್ಧಾತ್ಮ ಜ್ಞಾನಾತ್ಮ ಭೂತಾತ್ಮ ಮಹಾತ್ಮವೆಂಬ ಅಷ್ಟ ಆತ್ಮಂಗಳು ತಾನಲ್ಲ. ಸಂಸ್ಥಿತ ತೃಣೀಕೃತ ವರ್ತಿನಿ ಕ್ರೋಧಿನಿ ಮೋಹಿನಿ ಅತಿಚಾರಿಣಿ ಗಂಧಚಾರಿಣಿ ವಾಸಿನಿಯೆಂಬ ಅಂತರಂಗದ ಅಷ್ಟಮದಂಗಳು ತಾನಲ್ಲ. ಕುಲ ಛಲ ಧನ ರೂಪ ಯೌವ್ವನ ವಿದ್ಯೆ ರಾಜ್ಯ ತಪವೆಂಬ ಬಹಿರಂಗ ಅಷ್ಟಮದಂಗಳು ತಾನಲ್ಲ. ರಸ ರುಧಿರ ಮಾಂಸ ಮೇದಸ್ಸು ಅಸ್ಥಿ ಮಜ್ಜೆ ಶುಕ್ಲವೆಂಬ ಸಪ್ತಧಾತುಗಳು ತಾನಲ್ಲ. ತನುವ್ಯಸನ, ಮನವ್ಯಸನ, ಧನವ್ಯಸನ, ರಾಜ್ಯವ್ಯಸನ, ವಿಶ್ವವ್ಯಸನ, ಉತ್ಸಾಹವ್ಯಸನ, ಸೇವಕವ್ಯಸನವೆಂಬ ಸಪ್ತವ್ಯಸನಂಗಳು ತಾನಲ್ಲ. ಕ್ಷುತ್ ಪಿಪಾಸೆ ಶೋಕ ಮೋಹ ಜನನ ಮರಣವೆಂಬ ಷಡೂರ್ಮಿಗಳು ತಾನಲ್ಲ. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವೆಂಬ ಅರಿಷಡ್ವರ್ಗಂಗಳು ತಾನಲ್ಲ. ಜಾತಿ, ವರ್ಣ, ಆಶ್ರಮ, ಕುಲ, ಗೋತ್ರ, ನಾಮಗಳೆಂಬ ಷಟ್ಭ್ರಮೆಗಳು ತಾನಲ್ಲ. ಅಸ್ತಿ, ಜಾಯತೇ, ಪರಿಣಮತೇ, ವರ್ಧತೇ, ವಿನಶ್ಯತಿ, ಅಪಕ್ಷೀಯತೇ ಎಂಬ ಷಡ್ಭಾವವಿಕಾರಂಗಳು ತಾನಲ್ಲ. ಅನ್ನಮಯ ಪ್ರಾಣಮಯ ಮನೋಮಯ ವಿಜ್ಞಾನಮಯ ಆನಂದಮಯವೆಂಬ ಪಂಚಕೋಶಂಗಳು ತಾನಲ್ಲ. ಸತ್ವ ರಜ ತಮೋಗುಣತ್ರಯಂಗಳು ತಾನಲ್ಲ. ಅಧ್ಯಾತ್ಮಿಕ, ಆಧಿದೈವಿಕ, ಆಧಿಭೌತಿಕವೆಂಬ ತಾಪತ್ರಯಂಗಳು ತಾನಲ್ಲ. ವಿಶ್ವ ತೈಜಸ ಪ್ರಾಜ್ಞವೆಂಬ ಜೀವತ್ರಯಂಗಳು ತಾನಲ್ಲ. ವಾತ ಪಿತ್ಥ ಕಫಂಗಳೆಂಬ ದೋಷತ್ರಯಂಗಳು ತಾನಲ್ಲ. ಆಣವ ಮಾಯಾ ಕಾರ್ಮಿಕವೆಂಬ ಮಲತ್ರಯಂಗಳು ತಾನಲ್ಲ. ಅಗ್ನಿಮಂಡಲ, ಆದಿತ್ಯಮಂಡಲ, ಚಂದ್ರಮಂಡಲವೆಂಬ ಮಂಡಲತ್ರಯಂಗಳು ತಾನಲ್ಲ. ಆಧಾರ, ಸ್ವಾಧಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೆ ಎಂಬ ಷಡುಚಕ್ರಂಗಳ ದಳ ವರ್ಣ ಅಕ್ಷರಂಗಳು ತಾನಲ್ಲ. ಜಾಗ್ರ ಸ್ವಪ್ನ ಸುಷುಪ್ತಿ ತೂರ್ಯ ತೂರ್ಯಾತೀತಗಳೆಂಬ ಪಂಚಾವಸ್ಥೆಗಳು ತಾನಲ್ಲ. ಜಾಗ್ರದಲ್ಲಿಯ ಜಾಗ್ರ, ಜಾಗ್ರದಲ್ಲಿಯ ಸ್ವಪ್ನ, ಜಾಗ್ರದಲ್ಲಿಯ ಸುಷುಪ್ತಿ, ಜಾಗ್ರದಲ್ಲಿಯ ತೂರ್ಯ, ಜಾಗ್ರದಲ್ಲಿಯ ತೂರ್ಯಾತೀತವೆಂಬ ಜಾಗ್ರಪಂಚಾವಸ್ಥೆಗಳು ತಾನಲ್ಲ. ಸ್ವಪ್ನದಲ್ಲಿಯ ಜಾಗ್ರ, ಸ್ವಪ್ನದಲ್ಲಿಯ ಸ್ವಪ್ನ, ಸ್ವಪ್ನದಲ್ಲಿಯ ಸುಷುಪ್ತಿ, ಸ್ವಪ್ನದಲ್ಲಿಯ ತೂರ್ಯ, ಸ್ವಪ್ನದಲ್ಲಿಯ ತೂರ್ಯಾತೀತವೆಂಬ ಸ್ವಪ್ನಪಂಚಾವಸ್ಥೆಗಳು ತಾನಲ್ಲ. ಸುಷುಪ್ತಿಯಲ್ಲಿಯ ಜಾಗ್ರ, ಸುಷುಪ್ತಿಯಲ್ಲಿಯ ಸ್ವಪ್ನ, ಸುಷುಪ್ತಿಯಲ್ಲಿಯ ಸುಷುಪ್ತಿ , ಸುಷುಪ್ತಿಯಲ್ಲಿಯ ತೂರ್ಯ, ಸುಷುಪ್ತಿಯಲ್ಲಿಯ ತೂರ್ಯಾತೀತವೆಂಬ ಸುಷುಪ್ತಿಯ ಪಂಚಾವಸ್ಥೆಗಳು ತಾನಲ್ಲ. ತೂರ್ಯದಲ್ಲಿಯ ಜಾಗ್ರ, ತೂರ್ಯದಲ್ಲಿಯ ಸ್ವಪ್ನ, ತೂರ್ಯದಲ್ಲಿಯ ಸುಷುಪ್ತಿ, ತೂರ್ಯದಲ್ಲಿಯ ತೂರ್ಯ, ತೂರ್ಯದಲ್ಲಿಯ ತೂರ್ಯಾತೀತವೆಂಬ ತೂರ್ಯಪಂಚಾವಸ್ಥೆಗಳು ತಾನಲ್ಲ. ತೂರ್ಯಾತೀತದಲ್ಲಿಯ ಜಾಗ್ರ, ತೂರ್ಯಾತೀತದಲ್ಲಿಯ ಸ್ವಪ್ನ , ತೂರ್ಯಾತೀತದಲ್ಲಿಯ ಸುಷುಪ್ತಿ, ತೂರ್ಯಾತೀತದಲ್ಲಿಯ ತೂರ್ಯ, ತೂರ್ಯಾತೀತದಲ್ಲಿಯ ತೂರ್ಯಾತೀತವೆಂಬ ತೂರ್ಯಾತೀತಪಂಚಾವಸ್ಥೆಗಳು ತಾನಲ್ಲ. ಸಕಲ-ಶುದ್ಧ-ಕೇವಲಾವಸ್ಥೆಗಳು ತಾನಲ್ಲ. ಸಕಲದಲ್ಲಿಯ ಸಕಲ, ಸಕಲದಲ್ಲಿಯ ಶುದ್ಧ, ಸಕಲದಲ್ಲಿಯ ಕೇವಲವೆಂಬ ಸಕಲತ್ರಿಯಾವಸ್ಥೆಗಳು ತಾನಲ್ಲ. ಶುದ್ಧದಲ್ಲಿಯ ಸಕಲ, ಶುದ್ಧದಲ್ಲಿಯ ಶುದ್ಧ, ಶುದ್ಧದಲ್ಲಿಯ ಕೇವಲವೆಂಬ ಶುದ್ಧತ್ರಿಯಾವಸ್ಥೆಗಳು ತಾನಲ್ಲ. ಕೇವಲದಲ್ಲಿಯ ಸಕಲ, ಕೇವಲದಲ್ಲಿಯ ಶುದ್ಧ, ಕೇವಲದಲ್ಲಿಯ ಕೇವಲವೆಂಬ ಕೇವಲತ್ರಿಯಾವಸ್ಥೆಗಳು ತಾನಲ್ಲ. ಜ್ಞಾತೃ ಜ್ಞಾನ ಜ್ಞೇಯವೆಂಬ ಜ್ಞಾನತ್ರಯಂಗಳು ತಾನಲ್ಲ. ಯಮ ನಿಯಮ ಆಸನ ಪ್ರಾಣಾಯಾಮ ಪ್ರತ್ಯಾಹಾರ ಧ್ಯಾನ ಧಾರಣ ಸಮಾಧಿಯೆಂಬ ಅಷ್ಟಾಂಗಯೋಗಂಗಳು ತಾನಲ್ಲ. ಧರ್ಮ ಅರ್ಥ ಕಾಮ ಮೋಕ್ಷಂಗಳೆಂಬ ಚತುರ್ವಿಧ ಪುರುಷಾರ್ಥಂಗಳು ತಾನಲ್ಲ. ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯವೆಂಬ ಚತುರ್ವಿಧಪದಂಗಳು ತಾನಲ್ಲ. ಅಣಿಮಾ ಗರಿಮಾ ಲಘಿಮಾ ಮಹಿಮಾ ಪ್ರಾಪ್ತಿ ಪ್ರಕಾಮ್ಯ ಈಶಿತ್ವ ವಶಿತ್ವ ಎಂಬ ಅಷ್ಟಮಹದೈಶ್ವರ್ಯಂಗಳು ತಾನಲ್ಲ. ರಾಜಸಹಂಕಾರ ತಾಮಸಹಂಕಾರ ಸ್ವಹಂಕಾರವೆಂಬ ಅಹಂಕಾರತ್ರಯಂಗಳು ತಾನಲ್ಲ. ಅಂಜನಾಸಿದ್ಧಿ, ಘುಟಿಕಾಸಿದ್ಧಿ, ರಸಸಿದ್ಧಿ, ಪಾದೋದಕಸಿದ್ಧಿ, ಪರಕಾಯ ಪ್ರವೇಶ, ದೂರಶ್ರವಣ, ದೂರದೃಷ್ಟಿ, ತ್ರಿಕಾಲಜ್ಞಾನವೆಂಬ ಅಷ್ಟಮಹಾಸಿದ್ಧಿಗಳು ತಾನಲ್ಲ. ಉದರಾಗ್ನಿ ಮಂದಾಗ್ನಿ ಶೋಕಾಗ್ನಿ ಕ್ರೋಧಾಗ್ನಿ ಕಾಮಾಗ್ನಿಯೆಂಬ ಪಂಚಾಗ್ನಿಗಳು ತಾನಲ್ಲ. ಪ್ರಕೃತಿ, ಪುರುಷ, ಕಾಲ, ಪರ, ವ್ಯೋಮಾಕಾಶಂಗಳು ತಾನಲ್ಲ. ಊರ್ಧ್ವಶೂನ್ಯ, ಅಧಃಶೂನ್ಯ, ಮಧ್ಯಶೂನ್ಯ, ಸರ್ವಶೂನ್ಯವಾಗಿಹ ಸಹಜನಿರಾಲಂಬವೇ ತಾನೆಂದರಿದ ಮಹಾಶರಣಂಗೆ ನಾಮ ರೂಪ ಕ್ರಿಯಾತೀತವಾಗಿಹ ಮಹಾಘನವೇ ತನ್ನ ಶಿರಸ್ಸು ನೋಡಾ. ದಿವ್ಯಜ್ಞಾನವೇ ತನ್ನ ಚಕ್ಷು, ಅಚಲಪದವೇ ತನ್ನ ಪುರ್ಬು, ಅಚಲಾತೀತವೇ ತನ್ನ ಹಣೆ ನೋಡಾ. ನಿರಾಕುಳಪದವೇ ತನ್ನ ನಾಸಿಕ, ನಿರಂಜನಾತೀತವೆ ತನ್ನ ಉಶ್ವಾಸ-ನಿಶ್ವಾಸ ನೋಡಾ. ನಿರಾಮಯವೇ ತನ್ನ ಕರ್ಣ, ನಿರಾಮಯಾತೀತವೇ ತನ್ನ ಕರ್ಣದ್ವಾರ ನೋಡಾ. ಅಮಲ ನಿರ್ಮಲವೇ ತನ್ನ ಗಲ್ಲ, ಅಮಲಾತೀತವೇ