Index   ವಚನ - 598    Search  
 
ಬ್ರಹ್ಮ ದೇವರಲ್ಲ, ವಿಷ್ಣು ದೇವರಲ್ಲ, ರುದ್ರ ದೇವರಲ್ಲ, ಈಶ್ವರ ದೇವರಲ್ಲ, ಸದಾಶಿವ ದೇವರಲ್ಲ, ಸಹಸ್ರಶಿರ, ಸಹಸ್ರಾಕ್ಷ, ಸಹಸ್ರಪಾದವನುಳ್ಳ ವಿರಾಟ್ಪುರುಷ ದೇವರಲ್ಲ; ವಿಶ್ವತೋಮುಖ, ವಿಶ್ವತೋಚಕ್ಷು, ವಿಶ್ವತೋಬಾಹು, ವಿಶ್ವತೋಪಾದವನುಳ್ಳ ಪರಮಪುರುಷ ದೇವರಲ್ಲ, ಸಹಜನಿರಾಲಂಬವೇ ತಾನೆಂದರಿದ ಮಹಾಶರಣ ತಾನೇ ದೇವ ನೋಡಾ ಅಪ್ರಮಾಣಕೂಡಲಸಂಗಮದೇವ.