ವಚನ - 1055     
 
ಕರ್ಮವಿಲ್ಲದ ಕಾಯ, ಕರಣವಿಲ್ಲದ ಪ್ರಾಣ. ಮಥನವಿಲ್ಲದ ಶಬ್ದ, ಗಮನವಿಲ್ಲದ ಮನ. ಗುಹೇಶ್ವರಾ ನಿಮ್ಮ ಬರವು ಸಂಗನಬಸವಣ್ಣನ ಮೆಚ್ಚು ನೋಡಾ.