ವಚನ - 1057     
 
ಕಲಿ ತನ್ನ ತಲೆಯನರಿದು ಕೈಯಲ್ಲಿ ಹಿಡಿದು ಹಲವು ದ್ವೀಪಕ್ಕೆ ಹೋಗಿ ತೊಳಲುತ್ತೈದಾನೆ! ಕಂಡವರು ತೋರಿರೆ, ಕೇಳಿದವರು ಹೇಳಿರೆ, ಬುದ್ಧಿಗೆಟ್ಟವ ಸುದ್ಧಿಯ ಬೆಸಗೊಳ್ಳುತ್ತೈದಾನೆ! ತಲೆ ತಲೆಯನೆ ನುಂಗಿ ಹಲವು ದ್ವೀಪಕ್ಕೆ ಹೋಯಿತ್ತು. ಗುಹೇಶ್ವರಾ, ತಲೆ ಮೊದಲಿಲ್ಲ!