ವಚನ - 1060     
 
ಕಾಗೆಯ ತಿಂದವನಲ್ಲದೆ ಭಕ್ತನಲ್ಲ. ಕೋಣನ ತಿಂದವನಲ್ಲದೆ ಮಹೇಶ್ವರನಲ್ಲ. ಕೋಡಗನ ತಿಂದವನಲ್ಲದೆ ಪ್ರಸಾದಿಯಲ್ಲ. ನಾಯ ತಿಂದವನಲ್ಲದೆ ಪ್ರಾಣಲಿಂಗಿಯಲ್ಲ. ಹೇಯವ ತಿಂದವನಲ್ಲದೆ ಶರಣನಲ್ಲ. ಇಂತೈವರ ತಿಂದವನಲ್ಲದೆ ಲಿಂಗೈಕ್ಯನಲ್ಲ ಗುಹೇಶ್ವರಾ!