ಆ ಅಖಂಡ ಜ್ಯೋತಿರ್ಮಯವಾಗಿಹ ಗೋಳಕಾಕಾರ ಪ್ರಣವದ
ತಾರಕಸ್ವರೂಪದಲ್ಲಿ ಸದ್ಯೋಜಾತಮುಖವಡಗಿತ್ತು.
ಆ ಪ್ರಣವದ ದಂಡಸ್ವರೂಪದಲ್ಲಿ ವಾಮದೇವಮುಖವಡಗಿತ್ತು.
ಆ ಪ್ರಣವದ ಕುಂಡಲಾಕಾರದಲ್ಲಿ ಅಘೋರಮುಖವಡಗಿತ್ತು.
ಆ ಪ್ರಣವದ ಅರ್ಧಚಂದ್ರಕದಲ್ಲಿ ತತ್ಪುರುಷಮುಖವಡಗಿತ್ತು.
ಆ ಪ್ರಣವದ ದರ್ಪಣಾಕಾರದಲ್ಲಿ ಈಶಾನಮುಖವಡಗಿತ್ತು ನೋಡಾ.
ಇದಕ್ಕೆ ಈಶ್ವರೋsವಾಚ:
ಸದ್ಯೋಜಾತಮಘೋರಂ ಚ ವಾಮಂ ತತ್ಪುರುಷಸ್ತಥಾ |
ಈಶಾನಂ ಪಂಚವಕ್ತ್ರಂ ಚ ಓಂಕಾರೇ ಚ ಲಯಂ ಗತಾಃ || ''
ಇಂತೆಂದುದಾಗಿ,
ಅಪ್ರಮಾಣಕೂಡಲಸಂಗಮದೇವಾ.