Index   ವಚನ - 1078    Search  
 
ಕಾಯಗೊಂಡ ಮಾನವರಂತೆ ಕೈಗೆ ಸಿಲುಕ. ಪ್ರಾಣವಿಡಿದ ಜೀವಿಗಳಂತೆ ಎಡೆಯಾಡದಿಪ್ಪ. ಕಾಂಬಡೆ ಕಂಗಳತೆಯಲ್ಲ, ಕೇಳುವಡೆ ಕಿವಿಗಳತೆಯಲ್ಲ. ಗುಹೇಶ್ವರನ ನಿಲುವು ಬರಿಯ ಸ್ತೋತ್ರಕ್ಕೆ ನಿಲುಕದು. ಕಾಣಾ ಸಿದ್ಧರಾಮಯ್ಯಾ.