Index   ವಚನ - 1082    Search  
 
ಕಾಯದ ಕಳವಳ ಕಾಣೆನೆಂದಲ್ಲಿ ಹೋಯಿತ್ತು. ಜೀವದ ದುಷ್ಕೃತ ದೂರವೆಂದಲ್ಲಿ ತಪ್ಪಿತ್ತು. ಕಾಯ ಜೀವವೆಂಬ ಸೂತಕ, ಮನ ನಿರ್ಮಲವಾದಲ್ಲಿಯೆ ಅಳಿಯಿತ್ತು. ಗುಹೇಶ್ವರನೆಂಬ ಲಿಂಗವನರಿಯಬೇಕಾದಡೆ, ನಿನ್ನ ಒಳಗ ತೊಳೆದು ನೋಡಾ ಸಿದ್ಧರಾಮಯ್ಯಾ.