Index   ವಚನ - 28    Search  
 
ಇಲ್ಲ ಇಲ್ಲೆಂಬೊ ನಿರ್ಬೈಲೊಳು ತಾನೇನು ಇಲ್ಲದವಾಚ್ಯ ಸ್ವಯಂಭು ಬೈಲ್ಹೆಂಗಾದುದೊ ತಾನೇ ತಾನೆಂದರೆ |ಪಲ್ಲ| ನಿರುಪಮ ನಿಃಕಳ ಪರಬ್ರಹ್ಮವಾದುದು ತಾನೆ ತಾನೆ ಆ- ಪರಬ್ರಹ್ಮದೊಳಗೆ ಚಿತ್ಕಳೆ ಅರವು ಆದುದು ತಾನೆ ತಾನೆ ಅರವಿನೊಳು ಅರವು ಅರಿತುದೆ ಮನವಾದುದು ತಾನೆ ಆ ಅರಿತ ಮನವೆ ನೆನವಿಗೆ ಘನವಾದುದು ತಾನೆ ತಾನೆ | 1 | ಘನವಾದ ಘನವೇ ತಾ ಘನಲಿಂಗವಾದುದು ತಾನೆ ತಾನೆ ಆ ಘನಲಿಂಗದೊಳಗೆ ತಾ ನವಲಿಂಗವಾದುದು ತಾನೆ ತಾನೆ ಆ ಘನಲಿಂಗವೇ ಅವನ ಅಂಗವಾದುದು ತಾನೆ ತಾನೆ ಘನ ನವಲಿಂಗವೇ ಬಹುಬಗೆಯಾದುದು ತಾನೆ | 2 | ನವಶಕ್ತಿ ನವಭಕ್ತಿ ನವನಾದವಾದುದು ತಾನೆ ತಾನೆ ನವಚಕ್ರ ನವವರ್ಣ ನವಮಂತ್ರವಾದುದು ತಾನೆ ತಾನೆ ನವಹಸ್ತ ನವಮುಖ ನವದೈವವಾದುದು ತಾನೆ ತಾನೆ ಈ ನವರೂಪು ನವರುಚಿ ನವತೃಪ್ತಿಯಾದುದು ತಾನೆ ತಾನೆ | 3 | ಮೂರಾರು ಮುಂದೆ ಮೂವತ್ತಾರಾದುದು ತಾನೆ ತಾನೆ ಈ ಮೂರಾರೇ ಇನ್ನೂರಾಹದಿನಾರಾದುದು ತಾನೆ ತಾನೆ ಮೂರಾರೇ ಹನ್ನೆರಡುನೂರಾ ತೊಂಬತ್ತಾರಾದುದು ತಾನೆ ತಾನೆ ಈ ಮೂರಾರೇ ಮೀರಿ ಈ ಜಗಮಯವಾದುದು ತಾನೆ ತಾನೆ | 4 | ಒಂದೇ ಮೂರಾದುದು ಒಂದೇ ಆರಾದುದು ತಾನೆ ತಾನೆ ಆ ಒಂದೇ ಆರು ಮೂರು ಒಂದೇ ಬರಿ ಆದುದು ತಾನೆ ತಾನೆ ಒಂದಾದ ಅಂದದಾನಂದ ನಾಮವಾದುದು ತಾನೆ ತಾನೆ ಈ ಸಂದ ಮಹಾಂತನ ಕಂದನಾದುದು ತಾನೆ ತಾನೆ | 5 |