Index   ವಚನ - 29    Search  
 
ಆಗ ಆದುದು ತಾನೆ ಇಕೊ ಈಗ ಆದುದು ತಾನೆ ಕೂಗಿ ಹೇಳಿದುದು ತಾನೆ ತಲೆದೂಗಿ ಕೇಳುವುದು ತಾನೆ |ಪಲ್ಲ| ಬೀಜ ಬಿತ್ತಾಯಿತು ಆ ಬೀಜವೇ ವೃಕ್ಷವಾಯಿತು ಬೀಜ ಫಲವಾಯಿತು ಬೀಜ ಬೀಜವೇ ರಸವಾಯಿತು. | 1 | ರಸವೆ ಊಟವಾಯಿತು ಆ ರಸವೇ ತಾಟಾಯಿತು ಆ ರಸವೇ ನೋಟಾಯಿತು ರಸವೇ ಕೂಟಾಯಿತು. | 2 | ಕೂಟೇ ಹೆಣ್ಣಾಯಿತು ಆ ಕೂಟೇ ಗಂಡಾಯಿತು ಕೂಟೇ ಪಿಂಡಾಯಿತು ಆ ಕೂಟೇ ಆಶಾಯಿತು. | 3 | ಆಶೆ ದೋಷವಾಯಿತು ಆಶೆ ಪಾಶವಾಯಿತು ಆ ಆಶೆ ಘಾಸ್ಯಾಯಿತು ಆಶೆ ಆಶೆ ನಾಶಾಯಿತು. | 4 | ನಾಶ ನಾನಾಯಿತು ಆ ನಾಶ ನೀನಾಯಿತು ನಾಶ ತಾನಾಯಿತು ನಾಶ ನಾಶ ಮಹಾಂತಾಯಿತು. | 5 |