Index   ವಚನ - 32    Search  
 
ಕಸ್ತೂರಿಮೃಗವು, ಕಸ್ತೂರಿಯ ಹುಡುಕುತ್ತ ಹೋದರೆ ಕಸ್ತೂರಿಮೃಗವು ತಾನಲ್ಲದೆ ಕಸ್ತೂರಿಯು ಸಿಗಲುಂಟೆ? ಕನ್ನಡಿಯ ಮಹಲಿನೊಳಗೆ ಕುನ್ನಿ ತಾ ಕೂತು ಸುತ್ತಲಿರ್ದ ಕನ್ನಡಿಯೊಳಗೆ ಕುನ್ನಿಗಳ ಕಂಡು ತನ್ನ ರೂಹೆಂದು ಅರಿಯದೆ ಅನ್ಯವೆಂದು ಕೂಗಲು ಆ ಕೂಗು ಎಂದಿಗೆ ಮಾಣ್ಬುದೋ ತನ್ನ ತಾ ತಿಳಿದಂದಿಗಲ್ಲದೆ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.