Index   ವಚನ - 35    Search  
 
ಕೊಡಲಿ ಪಿಡಿದಲ್ಲದೇ ಕಾಡು ಕಡಿಯದು. ಆ ಕಾಡ ಕಡಿದಲ್ಲದೆ ಕಲ್ಪವೃಕ್ಷದ ವನವು ಕಾಣದು. ಆ ಕಲ್ಪವೃಕ್ಷದ ವನವ ಕಂಡಡೂ, ಆ ಕಲ್ಪವೃಕ್ಷದ ವನವನಳಿದಲ್ಲದೆ ಕದಳಿಯು ಸಿಗದು. ಆ ಕದಳಿಯ ಸುಲಿದು ಒಳಪೊಕ್ಕಲ್ಲದೆ ನಿಜವು ತಿಳಿಯದು. ಆ ನಿಜವು ತಿಳಿದಲ್ಲದೆ ನಿರ್ಬಯಲು ತಾನಾಗದು ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.